ಕಲಬುರಗಿ: ಇಂದು ನಗರಕ್ಕೆ ಆಗಮಿಸಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ವಿದ್ಯಾರ್ಥಿಗಳೊಂದಿಗೆ ಮುಕ್ತ ಸಂವಾದ ನಡೆಸಿದರು.
ನಗರದ ರೋಟರಿ ಕ್ಲಬ್ನಲ್ಲಿ ಆಯೋಜಿಸಿದ್ದ ವಿವಿಧ ಶಾಲೆಗಳ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವರು ಮಕ್ಕಳ ಸಮಸ್ಯೆಗಳನ್ನು ಆಲಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಬೆಳೆದು ದೊಡ್ಡವರಾದ ಮೇಲೆ ಯಾವುದೇ ಹುದ್ದೆಗೆ ಸೇರಿದರೂ ಆ ಕ್ಷೇತ್ರದಲ್ಲಿ ನಿಷ್ಠಾವಂತರಾಗಿ ಒಳ್ಳೆಯ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಕಿವಿಮಾತು ಹೇಳಿದರು.