ಕಲಬುರಗಿ: ಬ್ರೆಕ್ ಥ್ರೋ ಸೈನ್ಸ್ ಸೊಸೈಟಿ ಮತ್ತಿತರ ಸಂಘಟನೆಗಳ ನೇತೃತ್ವದಲ್ಲಿ ವಿಜ್ಞಾನ ಜಾಥಾವನ್ನು ನಡೆಸಲಾಯಿತು.
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾ ವಿಜ್ಞಾನ ಕೇಂದ್ರದವರೆಗೆ ನಡೆದ ಜಾಥಾದಲ್ಲಿ ವಿವಿಧ ಶಾಲಾ-ಕಾಲೇಜು ಮಕ್ಕಳು ಭಾಗವಹಿಸಿದ್ದರು. ಜಾಥಾ ನಂತರ ವಿಜ್ಞಾನ ಕೇಂದ್ರದಲ್ಲಿ ವಿಜ್ಞಾನ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವಿಜ್ಞಾನದ ಮಹತ್ವ ಜೊತೆಗೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವಂತೆ ಕರೆ ನೀಡಲಾಯಿತು.
ಇದೆ ವೇಳೆ ಮಕ್ಕಳಿಗೆ ವಿಜ್ಞಾನ ಕೇಂದ್ರದಲ್ಲಿರುವ ಎಲೆಕ್ಟ್ರಾನಿಕ್ ಸಂಶೋಧನಾ ಉಪಕರಣಗಳು, ರಾಕೆಟ್ ಉಡಾವಣೆಯ ಮಾದರಿ, ಡೈನೋಸಾರ್‌ಗಳನ್ನು ಪ್ರದರ್ಶಿಸಲಾಯಿತು.