ETV Bharat / state

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ಕಲಬುರಗಿಯಲ್ಲಿ ಸೆ. 144 ಜಾರಿ

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ ಕಲಬುರಗಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ವಿವಿ ಜೋತ್ಸ್ಯಾ ಸೆಕ್ಷನ್​ 144 ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಮುಷ್ಕರ ಸಂದರ್ಭದಲ್ಲಿ ಸಾರಿಗೆ ನಿಗಮದ ಆಸ್ತಿಪಾಸ್ತಿಗೆ ಹಾನಿ ಉಂಟಾದಲ್ಲಿ, ಕರ್ತವ್ಯಕ್ಕೆ ಅಡ್ಡಿ ಪಡಿಸಿದಲ್ಲಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

section 144 imposted in kalburgi
ಜಿಲ್ಲಾಧಿಕಾರಿ ವಿವಿ ಜೋತ್ಸ್ಯಾ
author img

By

Published : Apr 7, 2021, 11:59 AM IST

ಕಲಬುರಗಿ: ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ ಜಿಲ್ಲೆಯಾದ್ಯಂತ ಬಸ್ ಡಿಪೋ ಹಾಗೂ ಬಸ್ ನಿಲ್ದಾಣಗಳ ಬಳಿ ಸೆ. 144 ಜಾರಿಗೊಳಿಸಿ ಜಿಲ್ಲಾಧಿಕಾರಿ ವಿ ವಿ ಜೋತ್ಸ್ಯಾ ಆದೇಶಿಸಿದ್ದಾರೆ.

ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರಕ್ಕೆ ಕರೆಕೊಟ್ಟಿದ್ದು ಜಿಲ್ಲೆಯಲ್ಲೂ ಸಹ ಮುಷ್ಕರದ ಕಾವು ಜೋರಾಗಿದೆ. ‌ಈ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗೂ ಕೋವಿಡ್ ಎರಡನೇ ಅಲೆ ಹರಡುವಿಕೆ ಹಿನ್ನೆಲೆ ಮುನ್ನೆಚ್ಚರಿಕೆ ‌ಕ್ರಮವಾಗಿ ಜಿಲ್ಲೆಯ ಆಳಂದ, ಅಫಜಲಪುರ, ಜೇವರ್ಗಿ, ಚಿತ್ತಾಪುರ, ಚಿಂಚೋಳಿ,ಸೇಡಂ, ಕಾಳಗಿ ‌ಬಸ್ ಡಿಪೋ ಹಾಗೂ ಬಸ್ ನಿಲ್ದಾಣಗಳ ಬಳಿ ರಾತ್ರಿ 10ಗಂಟೆಯವರಗೆ ಸಿಆರ್​ಪಿಸಿ ಕಾಯ್ದೆ 1973ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಮುಷ್ಕರ ಸಂದರ್ಭದಲ್ಲಿ ಸಾರಿಗೆ ನಿಗಮದ ಆಸ್ತಿ-ಪಾಸ್ತಿಗೆ ಹಾನಿ ಉಂಟಾದಲ್ಲಿ, ಕರ್ತವ್ಯಕ್ಕೆ ಅಡ್ಡಿ ಪಡಿಸಿದಲ್ಲಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.