ETV Bharat / state

ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ್ ಕೋವಿಡ್​ಗೆ ಬಲಿ - ಜಯತೀರ್ಥ ಕಾಗಲಕರ್ ಕೋವಿಡ್​​ನಿಂದ ಸಾವು

ಕಲಬುರಗಿಯ ಹಿರಿಯ ಪತ್ರಕರ್ತ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.

Senior journalist Jayateerta Kagalakar dies due due to covid
ಜಯತೀರ್ಥ ಕಾಗಲಕರ್ ಕೋವಿಡ್​ಗೆ ಬಲಿ
author img

By

Published : May 13, 2021, 2:11 PM IST

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಕಲಬುರಗಿ ಆವೃತ್ತಿಯ ಸ್ಥಾನಿಕ ಸಂಪಾದಕ ಜಯತೀರ್ಥ ಕಾಗಲಕರ್ (53) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ವಾರದ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ : ಹೆಚ್‌.ಡಿ ಕೋಟೆಯಲ್ಲಿ ಕೊರೊನಾ ಸೋಂಕಿತನ ಮೇಲೆ ಕಲ್ಲೆಸೆತ

ಕಳೆದ ಮೂರು ದಶಕದಿಂದ ಸಂಯುಕ್ತ ಕರ್ನಾಟಕದ ವರದಿಗಾರರಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಾ ಇತ್ತೀಚಿಗೆ ಸ್ಥಾನಿಕ ಸಂಪಾದಕರಾಗಿ ಬಡ್ತಿ ಹೊಂದಿದ್ದರು. ಹಲವು ಜನಪರ ವರದಿಗಳ ಮೂಲಕ ಸರ್ಕಾರದ ಗಮನ ಸೆಳೆಯುತ್ತಿದ್ದ ಕಾಗಲಕರ್ ಅವರ ಅಗಲುವಿಕೆಗೆ ಸಂಸದರು, ಶಾಸಕರು ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಶೋಕ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.