ಕಲಬುರಗಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಭಾರತ ಸೌಹಾರ್ದ ವೇದಿಕೆ ವತಿಯಿಂದ ಲೈಂಗಿಕ ಅಲ್ಪಸಂಖ್ಯಾತರು ಪ್ರತಿಭಟನೆ ನಡೆಸಿದರು.
ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಕೆ.ನೀಲಾ ನೇತೃತ್ವದಲ್ಲಿ ನಗರದ ಎಸ್‌ವಿಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಲೈಂಗಿಕ ಅಲ್ಪಸಂಖ್ಯಾತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪೌರತ್ವ ಕಾಯ್ದೆ ಜಾರಿಗೆ ತರುವ ಮೂಲಕ ಕೇಂದ್ರ ಸರ್ಕಾರ ದೇಶದ ಸಮಾನತೆಯನ್ನು ಒಡೆಯುವ ಹುನ್ನಾರ ನಡೆಸಿದೆ. ದೇಶದಲ್ಲಿ ಬಡತನ, ನಿರುದ್ಯೋಗ ತಾಂಡವವಾಡುತ್ತಿದೆ. ಬಡತನ ನಿರ್ಮೂಲನೆಗೆ ಕ್ರಮಕೈಗೊಳ್ಳಬೇಕಾದ ಸರ್ಕಾರ, ವಿನಾಃಕಾರಣ ಈ ರೀತಿಯ ಅಸಂವಿಧಾನಿಕ ಕಾನೂನು ಜಾರಿಗೆರುವ ಮೂಲಕ ದೇಶದ ಏಕತೆಗೆ ಧಕ್ಕೆ ಉಂಟುಮಾಡುತ್ತಿದೆ ಎಂದು ಆರೋಪಿಸಿದರು.