ಕಲಬುರಗಿ: ಕಲಬುರಗಿಯ ಪ್ರಸಿದ್ಧ ಶರಣಬಸವೇಶ್ವರ ಸಂಸ್ಥಾನದ ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿಗಳ ದೇಣಿಗೆ ನೀಡಲಾಗಿದೆ.
ಸಂಸ್ಥಾನದ ಪೀಠಾಧಿಪತಿ ಡಾ. ಶರಣಬಸಪ್ಪ ಅಪ್ಪಾ ಅವರು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ವತಿಯಿಂದ ಕೋವಿಡ್-19 ನಿಯಂತ್ರಿಸುಲು ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿಗಳ ದೇಣಿಗೆಯ ಚೆಕ್ಕನ್ನು ಜಿಲ್ಲಾಧಿಕಾರಿ ಬಿ.ಶರತ್ ಅವರಿಗೆ ಹಸ್ತಾಂತರಿಸಿದರು.
ಸಂಸದ ಉಮೇಶ್ ಜಾಧವ, ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ವಿಧಾನ ಪರಿಷತ್ ಸದಸ್ಯ ಬಿ ಜಿ ಪಾಟೀಲ, ಬಿಜೆಪಿಯ ಜಿಲ್ಲಾ ಅಧ್ಯಕ್ಷರಾದ ಶಿವರಾಜ್ ಪಾಟೀಲ ರದ್ದೆವಾಡಗಿ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.