ಕಲಬುರಗಿ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಶ್ರೀಶರಣಬಸವ ಖಾಸಗಿ ವಿವಿ ಮೌಲ್ಯಮಾಪನ ವಿಭಾಗದ ಕುಲಸಚಿವ ಲಿಂಗರಾಜ್ ಶಾಸ್ತ್ರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಹಣಮಂತವಾಡಿ ಬಳಿ ನಡೆದಿದೆ.
ವಿಷಯ ತಿಳಿಯುತ್ತಿದ್ದಂತೆ ವಿವಿಯ ಪ್ರಾಧ್ಯಾಪಕ, ಸಿಬ್ಬಂದಿ ವರ್ಗ ಸ್ಥಳಕ್ಕೆ ಆಗಮಿಸಿದ್ದರು. ಅತಿ ವೇಗದಿಂದ ಕಾರು ಚಲಾಯಿಸಿದ್ದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.