ಕಲಬುರಗಿ: ಔರಾದ್ಕರ್ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ನಗರದಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಆರಂಭಿಸಿದ ಸಹಿ ಅಭಿಯಾನಕ್ಕೆ ವಿವಿಧ ಮಠಾಧೀಶರು ಚಾಲನೆ ನೀಡಿದರು.
ಕಾನೂನು-ಸುವ್ಯವಸ್ಥೆ ಕಾಪಾಡಲು ಪೊಲೀಸರು ಎಲ್ಲವನ್ನು ತ್ಯಜಿಸಿ ಹಗಲಿರುಳೆನ್ನದೆ ಶ್ರಮಿಸುತ್ತಾರೆ. ಆದರೆ ಅವರ ಕಷ್ಟ-ಕಾರ್ಪಣ್ಯ ಕೇಳುವವರೇ ಇಲ್ಲದಂತಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸರಿಗೆ ನ್ಯಾಯಬದ್ಧ ಪ್ರಯೋಜನ ಮತ್ತು ಸೌಲಭ್ಯಗಳು ಸಿಗಬೇಕೆಂದರೆ ಔರಾದ್ಕರ್ ವರದಿಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಲಾಯಿತು.
ಔರಾದ್ಕರ್ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ 15 ದಿನಗಳ ಗಡುವು ನೀಡಿರುವ ಸಮಿತಿ, ತದನಂತರದಲ್ಲಿ ಬೆಂಗಳೂರಿನಲ್ಲಿ ಗೃಹ ಸಚಿವರ ನಿವಾಸದ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದೆ.