ನಗರದ ಸರದಾರ್ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಆಟೋ, ಬಸ್, ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ತಂಪು ಪಾನೀಯ ನೀಡುವ ಮೂಲಕ ಸಂಭ್ರಮಿಸಿದರು.
ಪುಲ್ವಾಮಾ ದಾಳಿಯಲ್ಲಿ 40ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತೀಯ ಸೈನಿಕ ಪಡೆ ಪಾಪಿ ಪಾಕ್‌ನ ಉಗ್ರತಾಣಗಳ ಮೇಲೆ ಪ್ರತಿದಾಳಿ ನಡೆಸಿ ಉಗ್ರ ತಾಣಗಳನ್ನು ಧ್ವಂಸಗೊಳಿಸುವ ಮೂಲಕ ವಿಶ್ವ ಮಟ್ಟದಲ್ಲಿ ಭಾರತೀಯ ಸೈನಿಕ ಪಡೆ ಎಷ್ಟು ಬಲಿಷ್ಠವಾಗಿದೆ ಎಂದು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಕಾರ್ಯಕರ್ತತರು ಸೈನಿಕರ ಶೌರ್ಯವನ್ನು ಕೊಂಡಾಡಿದರು.