ETV Bharat / state

ಪರಿಷತ್‌ ಚುನಾವಣೆಯಲ್ಲಿ ಜೆಡಿಎಸ್‌ಗೆ 3 ಸ್ಥಾನ ಗೆಲುವು-ಎಂಎಲ್‌ಸಿ ಶ್ರೀಕಂಠೇಗೌಡ

ಸದ್ಯ ನಡೆಯುತ್ತಿರೋ ನಾಲ್ಕು ವಿಧಾನಪರಿಷತ್ ಸ್ಥಾನಗಳ ಪೈಕಿ ಮೂರು ಸ್ಥಾನಗಳನ್ನು ಜೆಡಿಎಸ್ ಗೆಲ್ಲಲಿದೆ. ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ಅಧಿಕಾರದಲ್ಲಿದ್ದಾಗ ಶಿಕ್ಷಕರ ಪರ ಕೈಗೊಂಡ ನಿರ್ಧಾರಗಳಿಂದಾಗಿ ಈಶಾನ್ಯ ಕ್ಷೇತ್ರದಲ್ಲಿಯೂ ತಿಮ್ಮಯ್ಯ ಪುರ್ಲೆ ಗೆಲುವು ಸಾಧಿಸಲಿದ್ದಾರೆ..

Srikanthaiiah
ಶ್ರೀಕಂಠಯ್ಯ
author img

By

Published : Oct 23, 2020, 7:38 PM IST

ಕಲಬುರಗಿ: ಅಕ್ಟೋಬರ್ 28 ರಂದು ನಡೆಯಲಿರುವ ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ಎಂಎಲ್‌ಸಿ ಚುನಾವಣೆಯಲ್ಲಿ ನಾಲ್ಕು ಸ್ಥಾನಗಳ ಪೈಕಿ ಮೂರನ್ನು ಜೆಡಿಎಸ್ ಗೆಲ್ಲಲಿದೆ ಎಂದು ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡರು..

ಜೆಡಿಎಸ್ ಅಭ್ಯರ್ಥಿ ತಿಮ್ಮಯ್ಯ ಪುರ್ಲೆ ಪರ ಪ್ರಚಾರ ಕೈಗೊಂಡ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸದ್ಯ ನಡೆಯುತ್ತಿರೋ ನಾಲ್ಕು ವಿಧಾನಪರಿಷತ್ ಸ್ಥಾನಗಳ ಪೈಕಿ ಮೂರು ಸ್ಥಾನಗಳನ್ನು ಜೆಡಿಎಸ್ ಗೆಲ್ಲಲಿದೆ. ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ಅಧಿಕಾರದಲ್ಲಿದ್ದಾಗ ಶಿಕ್ಷಕರ ಪರ ಕೈಗೊಂಡ ನಿರ್ಧಾರಗಳಿಂದಾಗಿ ಈಶಾನ್ಯ ಕ್ಷೇತ್ರದಲ್ಲಿಯೂ ತಿಮ್ಮಯ್ಯ ಪುರ್ಲೆ ಗೆಲುವು ಸಾಧಿಸಲಿದ್ದಾರೆ ಎಂದರು.

ವಿಧಾನ ಪರಿಷತ್​ನಲ್ಲಿ ಶಿಕ್ಷಕರ ಪರ ಹೋರಾಡುವೆ : ನಂತರ ಮಾತನಾಡಿದ ಜೆಡಿಎಸ್ ಅಭ್ಯರ್ಥಿ ತಿಮ್ಮಯ್ಯ ಪುರ್ಲೆ, ಶಿಕ್ಷಕನಾಗಿ ಸೇವೆ ಸಲ್ಲಿಸಿ, ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ. ಎರಡು ದಶಕಗಳಿಗೂ ಹೆಚ್ಚು ಕಾಲ ಶಿಕ್ಷಕರ ಸಂಘಟನೆ ಮಾಡಿ, ಸಮಸ್ಯೆಗಳ ನಿವಾರಣೆಗೆ ಹೋರಾಟ ಮಾಡಿದ್ದೇನೆ. ಅದೇ ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದ ಅವರು, ವಿಧಾನ ಪರಿಷತ್ತಿನಲ್ಲಿ ಶಿಕ್ಷಕರ ಪರವಾಗಿ ಹೋರಾಟ ಮಾಡುವೆ ಎಂದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.