ಕಲಬುರಗಿ: ಹಿಂದೂ ದೇವಸ್ಥಾನ ಆವರಣದಲ್ಲಿ ಹಿಂದೂಯೇತರ ವ್ಯಾಪಾರಿಗಳಿಗೆ ನಿರ್ಬಂಧ ಹೇರುವಂತೆ ಶ್ರೀರಾಮ ಸೇನೆ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಮುಖಾಂತರ ಸಿಎಂ ಬೊಮ್ಮಾಯಿ ಹಾಗೂ ಮುಜರಾಯಿ ಇಲಾಖೆ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಬಳಿಕ, ಶ್ರೀರಾಮ ಸೇನೆ ಮುಖಂಡ ಸಂತೋಷ್ ಬೆನಕನಹಳ್ಳಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಶ್ರೀ ರಾಮಸೇನೆ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಧಾರ್ಮಿಕ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳ ಆವರಣದಲ್ಲಿ ಹಿಂದೂಯೇತರರು ವ್ಯಾಪಾರ-ವಹಿವಾಟು ಮಾಡಲು ಅವಕಾಶ ನೀಡಬಾರದು ಎಂದು ಮನವಿ ಸಲ್ಲಿಸಿದ್ದೇವೆ. 2002ರಲ್ಲಿಯೇ ಸರ್ಕಾರ ಈ ಬಗ್ಗೆ ಕಾಯ್ದೆ ಹೊರಡಿಸಿದೆ. ಆ ಕಾಯ್ದೆಯ ಅನ್ವಯ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳ ಆವರಣದಲ್ಲಿ ಹಿಂದೂಯೇತರರಿಗೆ ಯಾವುದೇ ವಹಿವಾಟು ಮಾಡಲು ಅವಕಾಶ ಇರುವುದಿಲ್ಲ ಎಂದರು.
ಇದನ್ನೂ ಓದಿ: ಹಿಂದೂಯೇತರರಿಗೆ ವ್ಯಾಪಾರ ನಿಷೇಧದ ಬ್ಯಾನರ್ ತೆರವು ಮಾಡದ್ದಕ್ಕೆ ಕಾಂಗ್ರೆಸ್ ಆಕ್ರೋಶ