ETV Bharat / state

ಮೇಲಾಧಿಕಾರಿಗಳ ಕಿರುಕುಳ ಆರೋಪ: ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನ - Accused of harassment of boss

ಕಿನಾರಾ ಕ್ಯಾಪಿಟಲ್ ಕಂಪನಿ ಕಲಬುರಗಿ ಶಾಖೆಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಮೇಲಾಧಿಕಾರಿಗಳ ವರ್ತನೆಯಿಂದ ಮನನೊಂದು ಡೆತ್​ನೋಟ್ ಬರೆದಿಟ್ಟು, ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ

author img

By

Published : Feb 23, 2022, 7:56 AM IST

ಕಲಬುರಗಿ: ಮೇಲಾಧಿಕಾರಿಗಳ ವರ್ತನೆಯಿಂದ ಮನನೊಂದು ಸಿಬ್ಬಂದಿ ಡೆತ್​ನೋಟ್ ಬರೆದಿಟ್ಟು, ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದಲ್ಲಿ ನಡೆದಿದೆ.

ಕಿನಾರಾ ಕ್ಯಾಪಿಟಲ್ ಕಂಪನಿ ಕಲಬುರಗಿ ಶಾಖೆಯ ಅಸಿಸ್ಟೆಂಟ್ ಮ್ಯಾನೇಜರ್ ಎಂದು ಹೇಳಿಕೊಂಡಿರುವ ಕೃಷ್ಣಕಾಂತ ಎಂಬಾತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಗಂಭೀರ ಪರಿಸ್ಥಿತಿಯಲ್ಲಿರುವ ಅವರನ್ನು ನಗರದ ಕೆಬಿಎನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೃಷ್ಣಕಾಂತ ಆತ್ಮಹತ್ಯೆ ಯತ್ನಕ್ಕೂ ಮುನ್ನ ಕಚೇರಿಯಲ್ಲಿಯೇ ಡೆತ್​ನೋಟ್ ಬರೆದಿಟ್ಟು, ಬಳಿಕ ಲೈವ್ ವಿಡಿಯೋ ಮಾಡಿ ತಮ್ಮ ಮೇಲೆ ನಡೆದಿರುವ ದೌರ್ಜನ್ಯದ ಬಗ್ಗೆ ಹೇಳಿಕೊಂಡಿದ್ದಾರೆ. ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಸಮರ್ಥವಾಗಿ ಕೆಲಸ ಮಾಡಿದರೂ ಅನಗತ್ಯವಾಗಿ ಕಲಬುರಗಿಯಿಂದ ವಿಜಯಪುರಕ್ಕೆ ವರ್ಗಾವಣೆ ಮಾಡಿದ್ದಾರೆ. ಈ ಬಗ್ಗೆ ಪ್ರಶ್ನಿಸಿದ್ರೆ ಅಪಹಾಸ್ಯ ಮಾಡಿ ಅವ್ಯಾಚ ಶಬ್ದಗಳಿಂದ ನಿಂದಿಸಿ ಮಾನಸಿಕವಾಗಿ ತೊಂದರೆ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಡೆತ್‌ನೋಟ್
ಡೆತ್‌ನೋಟ್

ಈ ಕುರಿತು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರೂ ಕೂಡ ಕ್ರಮ ಕೈಗೊಳ್ಳುವ ಬದಲು ಯಾವುದೇ ನೋಟಿಸ್ ನೀಡದೇ ಕೆಲಸದಿಂದ ತೆಗೆದುಹಾಕಿದ್ದಾರೆ ಎಂದು ಆರೋಪಿಸಿದ ಕೃಷ್ಣಕಾಂತ, ತನ್ನ ಆತ್ಮಹತ್ಯೆಗೆ ಕಿನಾರಾ ಕ್ಯಾಪಿಟಲ್‌ನ ಐದು ಜನ ಅಧಿಕಾರಿಗಳ ಹೆಸರು ಪ್ರಸ್ತಾಪಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇನ್ನು ಕೃಷ್ಣಕಾಂತ ಅವರನ್ನ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಎಂಬಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.