ಕಲಬುರಗಿ: ನಕ್ಷತ್ರ ಆಮೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ವಿದ್ಯಾನಂದ ಮತ್ತು ಜಿತೇಂದ್ರ ಎಂಬ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರು ಸೇರಿಕೊಂಡು ನಗರದ ರೈಲ್ವೆ ನಿಲ್ದಾಣದ ಬಳಿ ನಕ್ಷತ್ರ ಆಮೆಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ.
ಓದಿ: ಸರಗೂರಲ್ಲಿ ಕಾಡಾನೆ ತುಳಿತಕ್ಕೆ ಕೇರಳದ ವ್ಯಕ್ತಿ ಬಲಿ!
ಚೆನ್ನೈ ವನ್ಯಜೀವಿ ಅಪರಾಧ ತಡೆ ಕಚೇರಿ ತಂಡದೊಂದಿಗೆ ವಲಯ ಅರಣ್ಯಾಧಿಕಾರಿ ರಮೇಶ ಮಾಳಾ ನೇತೃತ್ವದ ತಂಡ ಮಾರಾಟದಲ್ಲಿ ತೊಡಗಿದ್ದ ಆರೋಪಿಗಳನ್ನು ಬಂಧಿಸಿ, ನಕ್ಷತ್ರ ಆಮೆ ವಶಪಡಿಸಿಕೊಂಡಿದ್ದಾರೆ.