ETV Bharat / state

ಪ್ರವಾಹ ಸಂತ್ರಸ್ತರ ನೋವಿಗೆ ಸರ್ಕಾರ ಸ್ಪಂದಿಸುತ್ತಿಲ್ಲ: ಎಂ.ವೈ.ಪಾಟೀಲ ಆರೋಪ

author img

By

Published : Oct 29, 2020, 2:44 PM IST

ಭೀಮಾ ನದಿ ಪ್ರವಾಹದಿಂದ ಸುಮಾರು 145 ಹಳ್ಳಿಗಳು ಜಲಾವೃತವಾಗಿ ರೈತರ ಬೆಳೆ ನಾಶವಾಗಿದ್ದರೂ ರಾಜ್ಯ ಸರ್ಕಾರ ಮಾತ್ರ ಸ್ಪಂದಿಸುತ್ತಿಲ್ಲ ಎಂದು ಶಾಸಕ ಎಂ.ವೈ.ಪಾಟೀಲ ಆರೋಪಿಸಿದ್ದಾರೆ.

: M y patil
ಎಂ. ವೈ. ಪಾಟೀಲ

ಕಲಬುರಗಿ: ಉತ್ತರ ಕರ್ನಾಟಕದಲ್ಲಿ ಪ್ರವಾಹ ಬಂದು ಜನ ಸಂಕಷ್ಟಕ್ಕೆ ಸಿಲುಕಿದ್ದರೂ ರಾಜ್ಯ ಸರ್ಕಾರ ಮಾತ್ರ ಸ್ಪಂದಿಸುತ್ತಿಲ್ಲ ಎಂದು ಅಫಜಲಪುರ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಂ.ವೈ.ಪಾಟೀಲ

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭೀಮಾ ನದಿಯಿಂದ ಹಿಂದೆಂದೂ ಬರದಂತಹ ಪ್ರವಾಹ ಬಂದಿದೆ. ಪರಿಣಾಮ ಅಫಜಲಪುರ ತಾಲೂಕಿನ 145 ಹಳ್ಳಿಗಳು ಜಲಾವೃತವಾಗಿ ರೈತರ ಬೆಳೆ ನಾಶವಾಗಿದೆ. ಇಲ್ಲಿನ ಸಾಕಷ್ಟು ಜನರು ಮನೆ- ಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಆದರೆ ಸರ್ಕಾರ ಮಾತ್ರ ಏನೂ ಗೊತ್ತಿಲ್ಲದಂತೆ ಮೌನಕ್ಕೆ ಶರಣಾಗಿದೆ ಎಂದು ಆರೋಪಿಸಿದರು.

ಪ್ರವಾಹ ಪೀಡಿತ ಪ್ರದೇಶಗಳ ಜನರಿಗೆ ಯಾವುದೇ ಸಹಾಯ ಮಾಡುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪಾಟೀಲ್, ಕಲಬುರಗಿ ಜಿಲ್ಲೆಯನ್ನು ರಾಷ್ಟ್ರೀಯ ವಿಪತ್ತು ಜಿಲ್ಲೆಯೆಂದು ಘೋಷಿಸಬೇಕು. ರಾಷ್ಟ್ರೀಯ ವಿಪತ್ತು ನಿಧಿಯಿಂದ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.