ಕಲಬುರಗಿ: ಚರಂಡಿ ಸ್ವಚ್ಛತೆ ವೇಳೆ ಇಬ್ಬರು ಕಾರ್ಮಿಕರು ದುರ್ಮರಣ ಹೊಂದಿರುವ ಘಟನಾ ಸ್ಥಳಕ್ಕೆ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದೊಂದು ಅಮಾನವೀಯ ಘಟನೆ. ಇಂತಹ ಘಟನೆ ನಡೆಯಬಾರದಿತ್ತು ಎಂದು ಬೆಸರ ವ್ಯಕ್ತಪಡಿಸಿದರು. ಮ್ಯಾನ್ ಹೋಲ್ ಆಳಕ್ಕಿದ್ದರೂ ಸಹ ಕಾರ್ಮಿಕರನ್ನು ಸ್ವಚ್ಛತೆಗೆಂದು ಇಳಿಸಲಾಗಿದೆ. ಇದರಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಸುಪ್ರೀಂಕೋರ್ಟ್ ಆದೇಶ ಮೀರಿ ಹೀಗೆ ಸ್ವಚ್ಛತೆಗಾಗಿ ಚರಂಡಿಗೆ ಇಳಿಸಿರುವುದು ತಪ್ಪು. ಈ ಕುರಿತು ವಿಚಾರಣೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ:
ಇನ್ನು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ. ಹೆಚ್ಚುವರಿಯಾಗಿ ಮತ್ತೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.