ಕಲಬುರಗಿ: ಜಾಮಿಯ ಮತ್ತು ಅಲಿಗಢ ಮುಸ್ಲಿಂ ವಿವಿ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ನಗರದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಕೇಂದ್ರ ಸರ್ಕಾರ ಹಾಗೂ ಪೊಲೀಸ್ ಇಲಾಖೆ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಜಾಮಿಯ ವಿವಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಹಲ್ಲೆ ಖಂಡನಿಯವಾಗಿದೆ. ದೆಹಲಿ ಪೊಲೀಸರು ಸರ್ಕಾರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಕೂಡಲೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಪೌರತ್ವ ಕಾಯ್ದೆ ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.