ಕಲಬುರಗಿ: ಭಾರಿ ಮಳೆಗೆ ಉತ್ತರ ಕರ್ನಾಟಕ ತತ್ತರಗೊಂಡಿರೋ ಹಿನ್ನೆಲೆಯಲ್ಲಿ ಮಳೆ ಹಾನಿ ಬಗ್ಗೆ ವರದಿ ಕಳಿಸಲು ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಲಬುರಗಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಹಿಂದೆಂದಿಗಿಂತಲೂ ಭಾರಿ ಮಳೆಯಾಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಎಲ್ಲಾ ಡಿಸಿ ಹಾಗೂ ಸಿಇಓಗಳಿಗೆ ಈಗಾಗಲೇ ಸೂಚನೆ ಕೊಡಲಾಗಿದೆ. ಕಲಬುರಗಿ ಸೇರಿ ಎಲ್ಲಾ ಜಿಲ್ಲೆಗಳ ವರದಿ ನೀಡಲು ಸೂಚಿಸಲಾಗಿದ್ದು, ಚುನಾವಣೆ ಇರುವುದರಿಂದ ಯಾವ ಭರವಸೆ ನೀಡಲು ಬರಲ್ಲ. ರಸ್ತೆ ಸೇತುವೆ ಮತ್ತು ಎಲ್ಲಾ ಹಾನಿಗಳ ಕಾಮಗಾರಿ ಮಾಡಿಸಲಾಗುವುದು ಎಂದರು.
ಇನ್ನು ಚುನಾವಣೆ ಮುಗಿಯುತ್ತಿದ್ದಂತೆಯೇ ಸರ್ಕಾರ ಕಾರ್ಯ ಪ್ರವೃತ್ತವಾಗಲಿದೆ ಎಂದು ಕಲಬುರಗಿಯಲ್ಲಿ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.