ETV Bharat / state

ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆ: ಮಾನವೀಯತೆ ಮೆರೆದ ಹಣ್ಣಿನ ವ್ಯಾಪಾರಿಗಳು! - sedam 144 section

ಸೇಡಂನಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಕಲ್ಪಿಸುವ ಮೂಲಕ ಹಣ್ಣಿನ ವ್ಯಾಪಾರಿಗಳು ಮಾನವೀಯತೆ ಮೆರೆದಿದ್ದಾರೆ.

kalburagi
ಕುಡಿಯುವ ನೀರಿನ ಪೂರೈಕೆ
author img

By

Published : Mar 21, 2020, 6:06 AM IST

ಸೇಡಂ: ಕೊರೊನಾ ಹರಡುವಿಕೆಯನ್ನು ತಡೆಯಲು ಜಿಲ್ಲಾಡಳಿತ ಕಠಿಣ ಕಾನೂನು ಜಾರಿಗೆ ತಂದಿದೆ. ಅಲ್ಲದೆ ಮಾರ್ಚ್​ 22ರವರೆಗೆ ಸೆಕ್ಷನ್ 144 ಜಾರಿ ಮಾಡಿದೆ. ಇದರ ಮಧ್ಯೆ ಸಾರ್ವಜನಿಕರಿಗೆ ಕುಡಿಯುವ ನೀರನ್ನು ಕಲ್ಪಿಸುವ ಮೂಲಕ ಹಣ್ಣಿನ ವ್ಯಾಪಾರಿಗಳು ಮಾನವೀಯತೆ ಮೆರೆದಿದ್ದಾರೆ.

ತುರ್ತು ಪರಿಸ್ಥಿತಿ ಹಿನ್ನೆಲೆಯಲ್ಲಿ ಹೋಟೆಲ್​ ಸೇರಿದಂತೆ ಇಡೀ ಮಾರುಕಟ್ಟೆಯನ್ನು ಬಂದ್ ಮಾಡಲಾಗಿದೆ. ಚಹಾ, ಊಟ, ಉಪಹಾರ ಸೇರಿದಂತೆ ಕುಡಿಯಲು ನೀರು ಸಹ ಸಿಗದಂತಹ ಪರಿಸ್ಥಿತಿ ತಾಲೂಕಿನಲ್ಲಿ ನಿರ್ಮಾಣವಾಗಿದೆ. ನೂರಾರು ಜನ ಹನಿ ನೀರಿಗೋಸ್ಕರ ಪರದಾಡುವಂತಹ ಸ್ಥಿತಿ ಕಂಡು ಹಣ್ಣಿನ ವ್ಯಾಪಾರಿಗಳ ಸಂಘದ ವತಿಯಿಂದ ಬಸ್ ನಿಲ್ದಾಣದ ಬಳಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಇದು ಜನ ಮೆಚ್ಚುಗೆಗೆ ಪಾತ್ರವಾಗಿದೆ.

ಹಣ್ಣಿನ ವ್ಯಾಪಾರಿಗಳಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆ

ಇನ್ನು 144 ಸೆಕ್ಷನ್ ಜಾರಿಗೆ ಹಿನ್ನೆಲೆಯಲ್ಲಿ ತಾಲೂಕು ಸಂಪೂರ್ಣವಾಗಿ ಸ್ತಬ್ದವಾಗಿದೆ. ಮಾರುಕಟ್ಟೆ ಬಂದ್ ಮಾಡಲಾಗಿದ್ದು, ಬಸ್ ಸಂಚಾರಕ್ಕೂ ಸಂಚಕಾರ ಎದುರಾಗಿದೆ. ಇನ್ನು ಕೊರೊನಾದಿಂದ ರಕ್ಷಿಸಿಕೊಳ್ಳಲು ಮಾಸ್ಕ್​ಗಳು ರಸ್ತೆಗಿಳಿದಿದ್ದು, ಭರ್ಜರಿ ವ್ಯಾಪಾರ ನಡೆಸಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.