ETV Bharat / state

ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ವಾರ್ಡನ್ ಅಮಾನತುಗೊಳಿಸಿ ಡಿಸಿ ಆದೇಶ - ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ ಗುರುಕರ್

ಸರ್ಕಾರಿ ಕೆಲಸವಲ್ಲದ, ರಾಜಕೀಯ ಪಕ್ಷಗಳ ಚುನಾವಣಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ವಾರ್ಡನ್ ಅಮಾನತಾಗಿದ್ದಾರೆ.

District Election Officer Yashwant V Gurukar
ಚುನಾವಣಾಧಿಕಾರಿ ಯಶವಂತ ವಿ. ಗುರುಕರ್
author img

By

Published : Apr 5, 2023, 10:37 PM IST

Updated : Apr 5, 2023, 10:42 PM IST

ಕಲಬುರಗಿ : ಚುನಾವಣಾ ಪ್ರಚಾರದಲ್ಲಿ ಭಾಗಿಯಾದ ಕಾರಣ ಸಮಾಜ ಕಲ್ಯಾಣ ಇಲಾಖೆಯ ಸೇಡಂ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿಪರ ವಸತಿ ನಿಲಯದ ವಾರ್ಡನ್ ಯಶೋಧಮ್ಮ ಅವರನ್ನು ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್ ಅಮಾನತು ಮಾಡಿ ಆದೇಶಿಸಿದ್ದಾರೆ. ಸೇಡಂ ತಾಲೂಕಿನ ಮಳಖೇಡ್ ಆದಿತ್ಯಾ ಕಾಲೋನಿಯಲ್ಲಿ ಕಳೆದ ಮಾರ್ಚ್ 21 ರಂದು ಇವರು ರಾಜಕೀಯ ಪಕ್ಷದ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಭಾವಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಚುನಾವಣಾ ಚಟುವಟಿಕೆಯಲ್ಲಿ ಯಶೋದಮ್ಮ ಭಾಗಿಯಾಗಿರುವುದು ಸ್ಪಷ್ಟವಾಗಿದೆ. ಇದರಿಂದ ಸೇಡಂ ವಿಧಾನಸಭಾ ಮತಕ್ಷೇತ್ರದ‌ ಚುನಾವಣಾಧಿಕಾರಿ ಹಾಗೂ ಸಹಾಯಕ ಆಯುಕ್ತರ ವರದಿ ಹಿನ್ನೆಲೆಯಲ್ಲಿ ಯಶೋದಮ್ಮ ಅವರನ್ನು ಪ್ರಜಾಪ್ರತಿನಿಧಿ ಕಾಯ್ದೆ-1951, ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು-1957 ಹಾಗೂ ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು-2021 ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಕ್ರಮ ಕೈಗೊಳ್ಳಲಾಗಿದೆ.

ನಿರ್ದಾಕ್ಷಿಣ್ಯ ಕ್ರಮದ ಎಚ್ಚರಿಕೆ: ಸರ್ಕಾರಿ ನೌಕರರು ಜಿಲ್ಲೆಯಲ್ಲಿ ಈ ರೀತಿಯಾಗಿ ಸರ್ಕಾರಿ ಕೆಲಸವಲ್ಲದ ರಾಜಕೀಯ ಪಕ್ಷಗಳ ಚುನಾವಣಾ ಕಾರ್ಯಗಳಲ್ಲಿ ತೊಡಗಿಕೊಂಡಿರುವುದು ಕಂಡುಬಂದಲ್ಲಿ ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಿ.ಸಿ.ಯಶವಂತ ವಿ. ಗುರುಕರ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಕಲಬುರಗಿ: ಪಿಎಂ ಮಿತ್ರ ಮೆಗಾ ಟೆಕ್ಸ್​ಟೈಲ್ ಪಾರ್ಕ್‌ ಕಾಮಗಾರಿಗೆ ಚಾಲನೆ ನೀಡಿದ ಸಿಎಂ​​

Last Updated : Apr 5, 2023, 10:42 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.