ETV Bharat / state

ತಳವಾರ, ಪರಿವಾರ ಸಮುದಾಯಕ್ಕೆ ಎಸ್​​ಟಿ ಪ್ರಮಾಣ ಪತ್ರ ನೀಡುವಂತೆ ಮುಂದುವರಿದ ಧರಣಿ - ಕಲಬುರಗಿಯಲ್ಲಿ ಪ್ರತಿಭಟನೆ

ತಳವಾರ, ಪರಿವಾರ ಎಸ್​​ಟಿ ಹೋರಾಟ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಧರಣಿ ಸತ್ಯಾಗ್ರಹ ಇಂದು 12 ದಿನಕ್ಕೆ ಕಾಲಿಟ್ಟಿದೆ.ತಳವಾರ ಹಾಗೂ ಪರಿವಾರ ಸಮುದಾಯಕ್ಕೆ ಎಸ್​​ಟಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಈ ಸತ್ಯಾಗ್ರಹ ನಡೆಸಲಾಗುತ್ತಿದೆ.

talwar and pariwar community protest in kalburgi
ಮುಂದುವರಿದ ಧರಣಿ
author img

By

Published : Sep 8, 2020, 5:13 PM IST

ಕಲಬುರಗಿ:ತಳವಾರ ಹಾಗೂ ಪರಿವಾರ ಸಮುದಾಯಕ್ಕೆ ಎಸ್​​ಟಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಕಲಬುರಗಿಯಲ್ಲಿ ಅನಿರ್ದಿಷ್ಟಾವಧಿ ಧರಣಿ ಮುಂದುವರೆದಿದೆ.

ಮುಂದುವರಿದ ಧರಣಿ
ತಳವಾರ, ಪರಿವಾರ ಎಸ್​​ಟಿ ಹೋರಾಟ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಧರಣಿ ಸತ್ಯಾಗ್ರಹ ಇಂದು 12 ದಿನಕ್ಕೆ ಕಾಲಿಟ್ಟಿದೆ. ಈ ವೇಳೆ ಮಾತನಾಡಿದ ಧರಣಿ ನಿರತ ತಳವಾರ, ಪರಿವಾರ ಎಸ್​​ಟಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಡಾ.ಸರ್ದಾರ್ ರಾಯಪ್ಪ, ತಳವಾರ ಮುತ್ತು ಪರಿವಾರ ಸಮುದಾಯದ ಎಸ್​​ಟಿ ಪಟ್ಟಿಗೆ ಸೇರಿಸುವಂತೆ ಕೇಂದ್ರ ಸರ್ಕಾರ ಹೀಗಾಗಲೇ ಅಧಿಸೂಚನೆ ಹೊರಡಿಸಿದೆ. ಆದರೂ ಸಹ ರಾಜ್ಯ ಸರ್ಕಾರ ಅಧಿಸೂಚನೆಗೆ ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದರು.

ಎರಡೂ ಸಮುದಾಯ ಮೀಸಲಾತಿಯಿಂದ ವಂಚಿತವಾಗಿದೆ. ರಾಜ್ಯ ಸರ್ಕಾರದ ಈ ನಿರ್ಲಕ್ಷ್ಯ ದಿಂದ ತಳವಾರ ಪರಿವಾರ ಸಮುದಾಯದ ಯುವಕರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ತೀವ್ರ ಸಮಸ್ಯೆ ಉಂಟಾಗುತ್ತಿದೆ. ಆದ್ದರಿಂದ ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ತಳವಾರ ಹಾಗೂ ಪರಿವಾರ ಸಮುದಾಯಗಳಿಗೆ ಎಸ್​​ಟಿ ಪ್ರಮಾಣ ಪತ್ರ ನೀಡಬೇಕು ಇಲ್ಲವಾದರೆ ಮುಂಬರುವ ದಿನಗಳಲ್ಲಿ ಪಟೇಲ್ ಮಾದರಿಯಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.