ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಅಬ್ಬರಿಸುತ್ತಿದೆ. ಶಾಲಾ ಮಕ್ಕಳು, ಶಿಕ್ಷಕರು ಮತ್ತು ಪೊಲೀಸರಿಗೆ ಕೊರೊನಾ ಸೋಂಕು ತಗುಲುತ್ತಿದ್ದು, ದಿನದಿಂದ ದಿನಕ್ಕೆ ಆತಂಕ ಹೆಚ್ಚಿಸುತ್ತಿದೆ. ಅಫಜಲಪುರ ತಾಲೂಕಿನ ನೀಲೂರು ಪ್ರೌಢ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ನೀಲೂರು ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಯ ಆರು ಜನ ಶಿಕ್ಷಕರು, ನಾಲ್ವರು ವಿದ್ಯಾರ್ಥಿಗಳಿಲ್ಲಿ ಸೋಂಕು ಪತ್ತೆಯಾಗಿದೆ. ಸದ್ಯ ತಾತ್ಕಾಲಿಕವಾಗಿ ಆ ಶಾಲೆಯನ್ನು ಬಂದ್ ಮಾಡಲಾಗಿದೆ.
ಓದಿ: ಕಿರಾತಕ ಸಿನಿಮಾ ನಿರ್ದೇಶಕ ಪ್ರದೀಪ್ ರಾಜ್ ನಿಧನ
ಕಲಬುರಗಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಇನ್ಸ್ಪೆಕ್ಟರ್ ಮತ್ತು ಏಳು ಸಿಬ್ಬಂದಿಗೂ ಕೊರೊನಾ ಸೋಂಕು ದೃಢಪಟ್ಟಿತ್ತು. ಇದೀಗ ಅಫಜಲಪುರ ಪಿಎಸ್ಐ, ರೇವೂರ ಠಾಣೆಯ ಪಿಎಸ್ಐ ಸೇರಿದಂತೆ ಪೊಲೀಸ್ ಇಲಾಖೆಯ ಹಲವು ಸಿಬ್ಬಂದಿಗೆ ಸೋಂಕು ವಕ್ಕರಿಸಿದೆ. ಸೋಂಕಿತರಲ್ಲಿ ಬಹುತೇಕರು ಹೋಂ ಐಸೋಲೇಷನ್‌ನಲ್ಲಿ ಉಳಿದು ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿನ ಗಂಭೀರತೆ ಇಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.