ಕಲಬುರಗಿ: ತಳವಾರ ಸಮುದಾಯಕ್ಕೆ ಎಸ್.ಟಿ ಪ್ರಮಾಣ ಪತ್ರ ನೀಡಲು ಆಗ್ರಹಿಸಿ ಕಲಬುರಗಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಲಾಗಿದೆ.
ತಳವಾರ ಪರಿವಾರ ಎಸ್.ಟಿ. ಹೋರಾಟ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಆಂರಭಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರೋ ಧರಣಿ 17ನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರ ಸ್ಪಂದಿಸದೇ ಇರೋ ಹಿನ್ನೆಲೆಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಲಾಗಿದೆ.
ತಳವಾರ ಪರಿವಾರಕ್ಕೆ ಎಸ್.ಟಿ. ಪ್ರಮಾಣ ಪತ್ರ ನೀಡಲು ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ. ಆದರೆ ರಾಜ್ಯ ಸರ್ಕಾರದಿಂದ ಅನಗತ್ಯ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ಕೂಡಲೇ ತಳವಾರ ಸಮುದಾಯಕ್ಕೆ ಎಸ್.ಟಿ. ಪ್ರಮಾಣ ಪತ್ರ ನೀಡಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ಮಾಡೋದಾಗಿ ಎಚ್ಚರಿಕೆ ನೀಡಿದರು.