ಕಲಬುರಗಿ: ಮನೆ ಹಿಂದೆ ಕಟ್ಟಿಗೆ ತರಲು ಹೋದ ಬಾಲಕಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಕಲಬುರಗಿ ತಾಲೂಕಿನ ಪಾಣೆಗಾಂವ್ ತಾಂಡಾದಲ್ಲಿ ನಡೆದಿದೆ.
ಪಾಯಲ್ (15) ಮೃತ ಬಾಲಕಿ. ಈಕೆಗೆ ವಿಷ ಕುಡಿಸಿ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ನಿನ್ನೆ ಸಂಜೆ ಬಾಲಕಿ ಕಟ್ಟಿಗೆ ತರುತ್ತೇನೆಂದು ಮನೆಯ ಹಿಂಭಾಗಕ್ಕೆ ತೆರಳಿದಾಗ ಈ ಘಟನೆ ನಡೆದಿದ್ದು, ಇಬ್ಬರು ಯುವಕರು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ವಿಷ ಕುಡಿಸಿ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಪಾಣೆಗಾಂವ್ ಗ್ರಾಮದ ನಿವಾಸಿಗಳಾದ ಸುನೀಲ್ ಮತ್ತು ಆತನ ಸ್ನೇಹಿತ ಸೇರಿ ವಿಷ ಕುಡಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಮೃತ ಬಾಲಕಿಯ ಪೋಷಕರು ಆರೋಪ ಮಾಡಿದ್ದಾರೆ. ಈ ಕುರಿತು ಫರತಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.