ಕಲಬುರಗಿ: ಇಷ್ಟವಿಲ್ಲದ ಮನಸ್ಸಿನಿಂದಲೇ ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ್ ಅವರು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.
ನಗರದ ಎನ್ ಇ ಕೆ ಎಸ್ ಆರ್ ಟಿ ಸಿ ಕೇಂದ್ರ ಕಚೇರಿಯಲ್ಲಿ ಸಾರಿಗೆ ಸಚಿವ ಡಿಸಿಎಂ ಲಕ್ಷ್ಮಣ ಸವದಿ ಸಮ್ಮುಖದಲ್ಲಿ ಪದಗ್ರಹಣ ಕಾರ್ಯಕ್ರಮ ಜರುಗಿತು. ರಾಜಕುಮಾರ್ ಪಾಟೀಲ್ ಕೆಕೆ ಆರ್ ಡಿಬಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು.ಆದರೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನವನ್ನು ದತ್ತಾತ್ರೇಯ ಪಾಟೀಲ್ ಅವರಿಗೆ ನೀಡಿರುವುದರಿಂದ ರಾಜಕುಮಾರ್ ಪಾಟೀಲ್ ತೇಲ್ಕೂರ್ರಿಗೆ ಎನ್ ಇ ಕೆ ಎಸ್ ಆರ್ ಟಿ ಸಿ ಅಧ್ಯಕ್ಷ ಸ್ಥಾನವನ್ನು ಸೂಚಿಸಲಾಗಿತ್ತು.
ಅಧ್ಯಕ್ಷ ಸ್ಥಾನಕ್ಕೆ ಹೆಸರು ಸೂಚಿಸಿ ತಿಂಗಳುಗಳೇ ಕಳೆದರೂ ಬೇಸರದಿಂದ ಅಧಿಕಾರ ಸ್ವೀಕರಿಸದೆ ಹಿಂಜರಿದಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಂಧಾನದ ಬಳಿಕ ಇಂದು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಅವರು, ಬಳಿಕ ಮಾತನಾಡಿ ಕಲ್ಯಾಣ ಕರ್ನಾಟಕ ಭಾಗದ ಸಾರಿಗೆ ಇಲಾಖೆ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.