ಕಲಬುರಗಿ: ಪೌರ ಕಾರ್ಮಿಕರ ಸೇವಾ ಖಾಯಮಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ ಪೌರ ಕಾರ್ಮಿಕರು ತಮಟೆ ಚಳವಳಿ ನಡೆಸಿದರು.
ಸಂಘದ ಗೌರವಾದ್ಯಕ್ಷ ಮಾರುತಿ ಮಾನ್ಪಡೆ ನೇತೃತ್ವದಲ್ಲಿ ಕಲಬುರಗಿ ಮಹಾನಗರ ಪಾಲಿಕೆ ಎದುರು ತಮಟೆ ಬಾರಿಸುವ ಮೂಲಕ ಪ್ರತಿಭಟಿಸಲಾಯಿತು. ಪೌರ ಕಾರ್ಮಿಕರ ವಿಷಯದಲ್ಲಿ ದಿವ್ಯ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಪೌರ ಕಾರ್ಮಿಕರು ಕೂಗಿದರು.
ನಗರದ ಸ್ವಚ್ಛತೆಗೆ ಶ್ರಮಿಸುತ್ತಿರುವ ಪೌರ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸಬೇಕು. ಪ್ರತಿ ಪೌರ ಕಾರ್ಮಿಕರಿಗೂ 30 X 40 ಸೈಟಿನಲ್ಲಿ ಮನೆ ನಿರ್ಮಿಸಿಕೊಡಬೇಕು. ಎಲ್ಲ ಪೌರ ಕಾರ್ಮಿಕರಿಗೂ ಕನಿಷ್ಟ 25 ಸಾವಿರ ರೂಪಾಯಿ ವೇತನ ನೀಡಬೇಕೆಂದು ಆಗ್ರಹಿಸಿದರು.