ETV Bharat / state

ಕಲಬುರಗಿ ಘತ್ತರಗಿ ಭಾಗಮ್ಮ ದೇವಸ್ಥಾನದಲ್ಲಿ ಕಳ್ಳತನ.. ಚಿನ್ನಾಭರಣ, ಹಣ ಕದ್ದು ಪರಾರಿ - ಈಟಿವಿ ಭಾರತ ಕನ್ನಡ

ಘತ್ತರಗಿ ಭಾಗಮ್ಮ ದೇವಸ್ಥಾನದಲ್ಲಿ ಕಳ್ಳತನ- ಚಿನ್ನಾಭರಣ ಮತ್ತು ಹುಂಡಿಯಲ್ಲಿನ ಹಣ ದೋಚಿ ಪರಾರಿ- ದೇವಸ್ಥಾನದ ಬಾಗಿಲು ಬಂದ್ ಮಾಡಿ ಪರಿಶೀಲನೆ

Ghattaragi Bhagamma temple
ದೇವಸ್ಥಾನದಲ್ಲಿ ಕಳ್ಳತನ
author img

By

Published : Dec 29, 2022, 12:29 PM IST

ಕಲಬುರಗಿ: ಅಫಜಲಪುರ ತಾಲೂಕಿನ ಸುಕ್ಷೇತ್ರ ಘತ್ತರಗಿ ಭಾಗಮ್ಮ ದೇವಸ್ಥಾನದಲ್ಲಿ ಬುಧವಾರ ತಡರಾತ್ರಿ ಕಳ್ಳತನ ನಡೆದಿದ್ದು, 250 ಗ್ರಾಂ ಚಿನ್ನಾಭರಣ ಮತ್ತು ಹುಂಡಿಯಲ್ಲಿನ ಹಣ ಕದ್ದೊಯ್ದಿರುವ ಪ್ರಕರಣ ನಡೆದಿದೆ.

ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ಈ ದೇವಸ್ಥಾನದ ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ, ಕಳ್ಳರು ತಡರಾತ್ರಿ ದೇವಸ್ಥಾನದ ಗರ್ಭಗುಡಿಯ ಬಾಗಿಲು ಮುರಿದು ಒಳನುಗ್ಗಿದ್ದಾರೆ. ದೇವಿ ಮೈಮೇಲಿನ ಚಿನ್ನಾಭರಣ ಮತ್ತು ಹುಂಡಿ ಹಣ ಕದ್ದು ಪರಾರಿಯಾಗಿದ್ದಾರೆ. ಬೆಳಗ್ಗೆ ಪೂಜೆಗೆಂದು ಬಂದ ಅರ್ಚಕರು ಬಾಗಿಲು ತೆರೆದಾಗ ಪ್ರಕರಣ ಬೆಳಕಿಗೆ ಬಂದಿದೆ.

ಈ ಹಿನ್ನೆಲೆ ತಾತ್ಕಾಲಿಕವಾಗಿ ದೇವಸ್ಥಾನದ ಬಾಗಿಲು ಬಂದ್ ಮಾಡಿ ಪೊಲೀಸರು, ಬೆರಳಚ್ಚು ತಂಡ ಮತ್ತು ಡಾಗ್ ಸ್ಕ್ವಾಡ್ ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಅಫಜಲಪುರ ತಹಶೀಲ್ದಾರ್ ಸಂಜೀವ್ ಕುಮಾರ ದಾಸರ್, ಸಿಪಿಐ ರಾಜಶೇಖರ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಶಬರಿಮಲೆಯಲ್ಲಿ ಮಂಡಲ ಪೂಜೆ ಸಂಪನ್ನ: 39 ದಿನಗಳಲ್ಲಿ 222 ಕೋಟಿ ರೂ ಕಾಣಿಕೆ ಸಂಗ್ರಹ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.