ಕಲಬುರಗಿ: ತೋಟದ ಮನೆಯಲ್ಲಿ ಕಳ್ಳತನ ನಡೆದಿರುವ ಘಟನೆ ಕಮಲಾಪುರ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ನಡೆದಿದೆ.
ತೋಟದ ಮನೆಯಲ್ಲಿದ್ದ ಸ್ಪ್ರಿಂಕ್ಲರ್ ಪೈಪ್, ಟಿವಿ, ಪ್ರಿಡ್ಜ್, ಸೋಪಾ ಸೆಟ್ ಸೇರಿ 68,500 ರೂಪಾಯಿ ಮೌಲ್ಯದ ವಸ್ತು ಕಳವು ಮಾಡಿ ಕಳ್ಳರು ಪರಾರಿಯಾಗಿದ್ದಾರೆ. ರಮೇಶ್ ಗೌಡಪ್ಪ ಎಂಬುವರಿಗೆ ಸೇರಿದ ತೋಟದ ಮನೆ ಇದಾಗಿದ್ದು, ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಕಳ್ಳತನ ಮಾಡಲಾಗಿದೆ.
ಈ ಕುರಿತು ಮಹಾಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶ್ವಾನ ದಳ, ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕಳ್ಳರ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.