ಕಲಬುರಗಿ: ಖದೀಮರು ದೇವರ ಮೂರ್ತಿಗೆ ಕನ್ನ ಹಾಕಿರುವ ಘಟನೆ ಕಮಲಾಪುರ ತಾಲೂಕಿನ ಪಟವಾದ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸಂಗಮೇಶ್ವರ ದೇವಸ್ಥಾನಕ್ಕೆ ತಡರಾತ್ರಿ ನುಗ್ಗಿದ ಕಳ್ಳರು ದೇವಸ್ಥಾನದ ಮುಖ್ಯದ್ವಾರ ಮುರಿದಿದ್ದಾರೆ. ಬಳಿಕ ಸುಮಾರು 4 ಲಕ್ಷ ಮೌಲ್ಯದ ಸಂಗಮೇಶ್ವರ ದೇವರ ಬೆಳ್ಳಿ ಮೂರ್ತಿ ಮತ್ತು ಪಾದುಕೆ ಕದ್ದೊಯ್ದಿದ್ದಾರೆ. ಬೆಳಗಿನ ಜಾವ ಪೂಜಾರಿ ದೇವಸ್ಥಾನಕ್ಕೆ ಪೂಜೆ ಮಾಡಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.
ಈ ಕುರಿತು ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.