ETV Bharat / state

ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಮಾಡುವ ಪ್ರಸ್ತಾವನೆ ಇಲ್ಲ : ಸಚಿವ ಸುಧಾಕರ್

ರಾಜ್ಯದಲ್ಲಿ ಜನತಾ ಕರ್ಫ್ಯೂವನ್ನೇ ಮುಂದುವರೆಸುವ ಬಗ್ಗೆ ಸಚಿವ ಸುಧಾಕರ್ ಸುಳಿವು ನೀಡಿದ್ದಾರೆ. ಸದ್ಯ, ಇರುವ ಜನತಾ ಕರ್ಫ್ಯೂ ಅವಧಿ ಮುಗಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

There is no proposal to Complete lockdown
ಆರೋಗ್ಯ ಸಚಿವ ಸುಧಾಕರ್
author img

By

Published : May 1, 2021, 11:32 AM IST

ಕಲಬುರಗಿ : ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಮಾಡುವ ಪ್ರಸ್ತಾವನೆ ಇಲ್ಲವೆಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದು, ಜನತಾ ಕರ್ಫ್ಯೂ ವಿಸ್ತರಣೆಯ ಸುಳಿವು ನೀಡಿದ್ದಾರೆ.

ಜನತಾ ಕರ್ಫ್ಯೂ ನಂತರವೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮಹಾರಾಷ್ಟ್ರ‌ದಲ್ಲಿ 44 ದಿನಗಳಿಂದ ಲಾಕ್ ಡೌನ್ ಜಾರಿಯಲ್ಲಿದೆ. ಈಗ ನಿಧಾನವಾಗಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಹೇಳುವ ಮೂಲಕ ರಾಜ್ಯದಲ್ಲಿ ಜನತಾ ಕರ್ಫ್ಯೂ ವಿಸ್ತರಿಸುವುದಾಗಿ ಪರೋಕ್ಷವಾಗಿ ಹೇಳಿದರು.

ಆರೋಗ್ಯ ಸಚಿವ ಸುಧಾಕರ್ ಪ್ರತಿಕ್ರಿಯೆ

ಓದಿ : ಬೆಂಗಳೂರಿಗೆ ಕೋವಿಡ್​ ಕಂಟಕ.. ರಾಜಧಾನಿಯಲ್ಲಿ 21,602 ಸೋಂಕಿತರು ಪತ್ತೆ!

ಜನತಾ ಕರ್ಫ್ಯೂನ 14 ದಿನಗಳ ಕಾಲಾವಧಿ ನಂತರ ಮುಂದಿನ ನಡೆ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.