ಕಲಬುರ್ಗಿ : ಕಾಂಗ್ರೆಸ್‌ನ ಹಿರಿಯ ನಾಯಕ, ರಾಜ್ಯಸಭಾ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜೀವ ಬೆದರಿಕೆ ಕರೆ ಬಂದಿರೋದನ್ನ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್ ಹಾಗೂ ಮಾಜಿ ಎಂಎಲ್ಸಿ ಅಲ್ಲಮಪ್ರಭು ಪಾಟೀಲ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಸರ್ಕಾರ ಹಾಗೂ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆದರಿಕೆ ಕರೆ ಮಾಡಿರುವ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿದರು.