ಕಲಬುರಗಿ: ಮಹಾರಾಷ್ಟ್ರ ರಾಜ್ಯ ಪ್ರವಾಸದಿಂದ ಮರಳಿರುವ ಜಿಲ್ಲೆಯ 3 ಜನರಿಗೆ ಗುರುವಾರ ಬೆಳಗ್ಗೆ ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ಡಿಸಿ ಶರತ್ ಬಿ ತಿಳಿಸಿದ್ದಾರೆ.
ಸೇಡಂ ತಾಲೂಕಿನ ಮೇದಕ್ ಗ್ರಾಮದ 30 ವರ್ಷದ ಮಹಿಳೆ (P-2422), ಶಹಾಬಾದ್ ತಾಲೂಕಿನ ಭಂಕೂರ ಬಳಿಯ ತರಿ ತಾಂಡಾದ 30 ವರ್ಷದ ಮಹಿಳೆ (P-2492) ಹಾಗೂ ಚಿತ್ತಾಪುರ ತಾಲೂಕಿನ ಅನಿಕೇರಿ ಬಳಿಯ ರಾಮಾನಾಯಕ್ ತಾಂಡಾ ಮೂಲದ 9 ವರ್ಷದ ಬಾಲಕನಿಗೆ (P-2493) ಕೋವಿಡ್-19 ದೃಢವಾಗಿದೆ. ಇವರೆಲ್ಲರೂ ಸರ್ಕಾರಿ ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 188ಕ್ಕೆ ಏರಿಕೆಯಾಗಿದೆ. ಇದರಲ್ಲಿ 75 ಜನ ಗುಣಮುಖರಾಗಿದ್ದರೆ, 7 ಜನರು ನಿಧನ ಹೊಂದಿದ್ದಾರೆ. ಉಳಿದಂತೆ 106 ಜನರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಡಿಸಿ ಶರತ್ ತಿಳಿಸಿದ್ದಾರೆ.