ಕಲಬುರಗಿಯಲ್ಲಿ ಸಿಡಿಲು ಬಡಿದು ಮೂವರು ಸಾವು - ಸಿಡಿಲು ಬಡಿದು ಮೂವರು ಸಾವು
ಕಲಬುರಗಿಯಲ್ಲಿ ಸಿಡಿಲಿನ ಅಬ್ಬರಕ್ಕೆ ಮೂವರು ಬಲಿಯಾಗಿದ್ದಾರೆ.

ಕಲಬುರಗಿಯಲ್ಲಿ ಸಿಡಿಲು ಬಡಿದು ಮೂವರು ಸಾವು
ಕಲಬುರಗಿ : ಜಿಲ್ಲೆಯಲ್ಲಿ ಸಿಡಿಲಿನ ಅಬ್ಬರಕ್ಕೆ ಮೂವರು ಬಲಿಯಾಗಿದ್ದಾರೆ. ಕಮಲಾಪುರ ತಾಲೂಕಿನ ಭುಂಯ್ಯಾರ್ ಗ್ರಾಮದಲ್ಲಿ ಇಬ್ಬರು ಸಾವನ್ನಪ್ಪಿದ್ದರೆ. ಚಿಂಚೋಳಿ ತಾಲೂಕಿನ ಕೋಡ್ಲಿ ಗ್ರಾಮದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಭುಂಯ್ಯಾರ ಗ್ರಾಮದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಸುಭಾಷ್ ಹಳಕೇರಿ (35) ಹಾಗೂ ಕುಪ್ಪಣ್ಣ ನವಲೆ (58) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೋಡ್ಲಿ ಗ್ರಾಮದಲ್ಲಿ ಜೆಸಿಬಿಯಿಂದ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಅನೀಲ್ ಭೋವಿ (22) ಎಂಬಾತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಈ ಕುರಿತು ಕಮಲಾಪುರ ಹಾಗೂ ರಟಕಲ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.