ETV Bharat / state

ಕಲಬುರಗಿಯಲ್ಲಿ ಕೊರೊನಾಗೆ ಮೂವರು ಬಲಿ: ಹೊಸದಾಗಿ 72 ಮಂದಿಯಲ್ಲಿ ಸೋಂಕು ಪತ್ತೆ

ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ 72 ಕೊರೊನಾ ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿವೆ. ಮಹಾರಾಷ್ಟ್ರದಿಂದ ಮರಳಿ ಬಂದವರು, ಅಂತರ್ ಜಿಲ್ಲಾ ಪ್ರವಾಸ, ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದವರು ಹಾಗೂ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 72 ಜನರಿಗೆ ಪಾಸಿಟಿವ್ ಬಂದಿದೆ.

Three deaths from corona infection in Kalaburagi district
ಕಲಬುರಗಿಯಲ್ಲಿ ಕೊರೊನಾಗೆ ಮತ್ತೆ ಮೂವರು ಬಲಿ...ಇಂದು 72 ಮಂದಿಗೆ ಕೊರೊನಾ ಪಾಸಿಟಿವ್
author img

By

Published : Jul 4, 2020, 1:24 AM IST

ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾಗೆ ಮೂವರು ಬಲಿಯಾಗಿದ್ದು, ಕಳೆದ 24 ಗಂಟೆಗಳಲ್ಲಿ 72 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

46 ವರ್ಷದ ಮಹಿಳೆ (ಪಿ-18391) ತೀವ್ರ ಉಸಿರಾಟದ ಸಮಸ್ಯೆಯಿಂದ ಜೂನ್ 30ರಂದು ಆಸ್ಪತ್ರೆಗೆ ದಾಖಲಾಗಿ, ಜುಲೈ 1ರಂದು ನಿಧನರಾಗಿದ್ದಾರೆ. 25 ವರ್ಷದ ಯುವತಿ (ಪಿ-16785) ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಜೂನ್ 28ರಂದು ಆಸ್ಪತ್ರೆಗೆ ದಾಖಲಾಗಿ, ಜುಲೈ 3ರಂದು ಸಾವನ್ನಪ್ಪಿದ್ದಾರೆ. 58 ವರ್ಷದ ಪುರುಷ (ಪಿ-15463) ತೀವ್ರ ಉಸಿರಾಟದ ಸಮಸ್ಯೆಯಿಂದ ಜೂನ್ 30ರಂದು ಆಸ್ಪತ್ರೆಗೆ ದಾಖಲಾಗಿ, ಅಂದೇ ಸಾವನ್ನಪ್ಪಿದ್ದಾರೆ.

ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ 72 ಕೊರೊನಾ ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿವೆ. ಮಹಾರಾಷ್ಟ್ರದಿಂದ ಮರಳಿ ಬಂದವರು, ಅಂತರ್ ಜಿಲ್ಲಾ ಪ್ರವಾಸ, ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದವರು ಹಾಗೂ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 72 ಜನರಿಗೆ ಪಾಸಿಟಿವ್ ಬಂದಿದೆ. ಅಲ್ಲದೆ, ಇಂದು 17 ಮಂದಿ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ1,560 ಆಗಿದ್ದು, ಮೃತಪಟ್ಟವರ ಸಂಖ್ಯೆ 22ಕ್ಕೆ ತಲುಪಿದೆ. ಗುಣಮುಖರಾದವರ ಸಂಖ್ಯೆ 1,143 ಹಾಗೂ 395 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.