ಕಲಬುರಗಿ: ಮನೆಗಳ್ಳತನ ಮಾಡುತ್ತಿದ್ದ ಮೂವರು ಖದೀಮರನ್ನು ರಾಘವೇಂದ್ರ ನಗರ ಪೊಲೀಸರು ಬಂಧಿಸಿದ್ದಾರೆ.
ಮಹ್ಮದ್ ಅತೀಕ್, ಮಹ್ಮದ್ ಸೂನು ಪುಟಾಣಗರ್ ಹಾಗೂ ಆಸೀಫ್ ಪಿಜಾವರ ಬಂಧಿತರು. ಇವರಿಂದ 4.23 ಲಕ್ಷ ರೂಪಾಯಿ ಮೌಲ್ಯದ 127 ಗ್ರಾಂ ಚಿನ್ನಾಭರಣ, 100 ಗ್ರಾಂ ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಯಡಾ ಮಾರ್ಟಿನ್ ತಿಳಿಸಿದ್ದಾರೆ.
ಬಂಧಿತರು ಮೇ.15 ರಂದು ವಿಶ್ವಾರಾಧ್ಯ ಕಾಲೋನಿಯ ವೀರಶೆಟ್ಟಿ ಮಾಣಿಕರಾವ್ ಎಂಬುವರ ಮನೆಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೇವಲ 5 ದಿನಗಳಲ್ಲಿ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ನ್ಯಾಯಾಂಗ ವಶಕ್ಕೆ ಪಡೆಯಲಾಗಿದ್ದು, ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.