ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಮುಂದುವರೆದಿದೆ. ಇಂದು ಮತ್ತೆ 14 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಎಲ್ಲಾ ಸೋಂಕಿತರೂ ಮುಂಬೈನಿಂದ ವಾಪಸ್ ಬಂದವರಾಗಿದ್ದಾರೆ. ಚಿತ್ತಾಪುರ ತಾಲೂಕಿನ ಕ್ವಾರಂಟೈನ್ ಹಾಗೂ ಕಾಳಗಿ ತಾಲೂಕಿನ ಕ್ವಾರಂಟೈನ್ ಕೇಂದ್ರದಲ್ಲಿ ಇರುವ ಒಟ್ಟು 14 ಜನರಿಗೆ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ.
42 ವರ್ಷದ ಪುರುಷ, 18 ವರ್ಷದ ಯುವಕ, 30 ವರ್ಷದ ಪುರುಷ, 10 ವರ್ಷದ ಬಾಲಕ, 55 ವರ್ಷದ ಮಹಿಳೆ, 45 ವರ್ಷದ ಪುರುಷ, 18 ವರ್ಷದ ಯುವಕ, 40 ವರ್ಷದ ಪುರುಷ, 15 ವರ್ಷದ ಬಾಲಕಿ, 26 ವರ್ಷದ ಪುರುಷ, 29 ವರ್ಷದ ಮಹಿಳೆ, 68 ವರ್ಷದ ವೃದ್ಧ, 35 ವರ್ಷದ ಮಹಿಳೆ ಹಾಗೂ 29 ವರ್ಷದ ಪುರುಷನಿಗೆ ಸೋಂಕು ದೃಢವಾಗಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 155ಕ್ಕೆ ಏರಿಕೆಯಾಗಿದೆ.