ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾಗೆ ಮತ್ತೋರ್ವ ಬಲಿಯಾಗಿದ್ದಾನೆ. 61 ವರ್ಷದ ವೃದ್ಧ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ಕೆಮ್ಮು, ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವ್ಯಕ್ತಿ ಜೂನ್ 22ರಂದು ಆಸ್ಪತ್ರೆಗೆ ದಾಖಲಾಗಿದ್ದ. ಜೂನ್ 23ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದು, ಇಂದು ಆತನಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದೆ. ಆತನ ಟ್ರಾವೆಲ್ ಹಿಸ್ಟರಿ ಇನ್ನೂ ತಿಳಿಯದೇ ಇರುವುದು ಆತಂಕಕ್ಕೆ ಕಾರಣವಾಗಿದೆ.
35 ಜನರಿಗೆ ಸೋಂಕು:
ಜಿಲ್ಲೆಯಲ್ಲಿ ಇಂದು ಒಂದೇ ದಿನ 35 ಜನರಿಗೆ ಸೋಂಕು ದೃಢಪಟ್ಟಿದೆ. ಈ ಪೈಕಿ 6 ಮಕ್ಕಳು, 12 ಮಹಿಳೆಯರು ಹಾಗೂ 17 ಪುರುಷರಿದ್ದಾರೆ. ಇಬ್ಬರ ಟ್ರಾವೆಲ್ ಹಿಸ್ಟರಿ ಇನ್ನೂ ತಿಳಿದು ಬಂದಿಲ್ಲ. ಮತ್ತಿಬ್ಬರು ಗುಜರಾತ್ನಿಂದ ವಾಪಸಾದವರಾಗಿದ್ದಾರೆ. ನಾಲ್ವರಿಗೆ ಸೋಂಕಿತರಿಂದ ಹರಡಿದೆ ಎನ್ನಲಾಗಿದ್ದು, ಉಳಿದಂತೆ ಮಹಾರಾಷ್ಟ್ರದಿಂದ ವಾಪಸಾದ ವಲಸಿಗರಾಗಿದ್ದಾರೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1,289ಕ್ಕೆ ಏರಿಕೆಯಾಗಿದ್ದು, ಇಂದು 31 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.