ಕಲಬುರಗಿ: ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಕರೆ ನೀಡಲಾದ ದೇಶವ್ಯಾಪ್ತಿ ರೈಲು ರೋಖೋ ಚಳವಳಿ ಬೆಂಬಲಿಸಿ ಕಲಬುರಗಿಯಲ್ಲಿ ರೈಲು ತಡೆಯಲು ಯತ್ನಿಸಿದ 30ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ಓದಿ: ಬಿಹಾರ ಚುನಾವಣೆಯಲ್ಲಿ ಆರ್ಜೆಡಿ - ಕಾಂಗ್ರೆಸ್ಗೆ ವಿಜಯೇಂದ್ರ ಹಣ: ಯತ್ನಾಳ್
ಎಪಿಎಂಸಿ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮತ್ತು ವಿದ್ಯುತ್ ಕಾಯ್ದೆ ವಾಪಸ್ಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾದಿಂದ ರೈಲು ರೋಖೋ ಹೋರಾಟ ಬೆಂಬಲಿಸಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಕಲಬುರಗಿ ರೈಲ್ವೆ ನಿಲ್ದಾಣದ ಎದುರು ಎರಡು ಗಂಟೆ ಪ್ರತಿಭಟನೆ ನಡೆಸಿದ ಬಳಿಕ, ರೈಲ್ವೆ ನಿಲ್ದಾಣದ ಒಳಗೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಬ್ಯಾರಿಕೇಡ್ ಬಳಿ ತಡೆದರು. ನಂತರ ರೊಚ್ಚಿಗೆದ್ದ ಹೋರಾಟಗಾರರು ರೈಲು ರೋಖೋಗೆ ಯತ್ನಿಸಿದರು. ಈ ವೇಳೆ ಮಾಜಿ ಶಾಸಕ ಬಿ.ಆರ್.ಪಾಟೀಲ್ ಸೇರಿದಂತೆ 30ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.