ಕಲಬುರಗಿ: ಏಳು ವರ್ಷದ ಬಾಲಕ ಸೇರಿ ಜಿಲ್ಲೆಯಲ್ಲಿ ಮತ್ತೆ ಇಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಪಿ. 422 ಸಂಪರ್ಕದಲ್ಲಿದ್ದ 65 ವರ್ಷದ ಮಹಿಳೆಗೆ ಹಾಗೂ ಪಿ.425 ಜೊತೆ ಸೆಕೆಂಡರಿ ಸಂಪರ್ಕದಲ್ಲಿದ್ದ 7 ವರ್ಷದ ಬಾಲಕನಿಗೆ ಕೊರೊನಾ ಸೋಂಕು ಇರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ.
ಸೋಂಕಿತರನ್ನು ಇಎಸ್ ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 38 ಕ್ಕೆ ಏರಿಕೆಯಾಗಿದೆ. ಕಳೆದೆರಡು ದಿನಗಳಿಂದ ಒಂದೂ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿರಲಿಲ್ಲ, ಹೀಗಾಗಿ ಜಿಲ್ಲೆಯ ಜನರು ನೆಮ್ಮದಿಯ ಉಸಿರು ಬಿಟ್ಟಿದ್ದರು. ಇದೀಗ ಮತ್ತೆ ಎರಡು ಕೊರೊನಾ ಕೇಸ್ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಶುರುವಾಗಿದೆ.