ETV Bharat / state

ಕಲಬುರಗಿ ಬಳಿ ದಿಬ್ಬಣದ ಬಸ್ ಪಲ್ಟಿ: ಇಬ್ಬರು ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ - ಕಬುರಗಿಯಲ್ಲಿ ಬಸ್​ ಪಲ್ಟಿ

ಕಲಬುರಗಿ ತಾಲೂಕಿನ ಹಾವನೂರ್ ಗ್ರಾಮದ ನಿವಾಸಿಗಳಾಗಿದ್ದು, ಆಳಂದ ತಾಲೂಕಿನ ರುದ್ರವಾಡಿ ಗ್ರಾಮದಲ್ಲಿ ಮದುವೆ ಮುಗಿಸಿಕೊಂಡು ವಾಪಸಾಗುವಾಗ ದುರ್ಘಟನೆ ಸಂಭವಿಸಿದೆ.

Bus overturns in kalaburagi
Bus overturns in kal Bus overturns in kalaburagiaburagi
author img

By

Published : Jun 1, 2022, 10:11 PM IST

Updated : Jun 1, 2022, 10:51 PM IST

ಕಲಬುರಗಿ : ದಿಬ್ಬಣದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಕಲಬುರಗಿ ತಾಲೂಕಿನ ಕಡಣಿ ಗ್ರಾಮದ ತಾಂಡಾಬಳಿ ನಡೆದಿದೆ. ಶಿವಕುಮಾರ್ ಹಾಗೂ ಇನ್ನೋರ್ವ ಮಹಿಳೆ ಮೃತಪಟ್ಟಿದ್ದಾರೆ. ಇವರೆಲ್ಲರೂ ಕಲಬುರಗಿ ತಾಲೂಕಿನ ಹಾವನೂರ್ ಗ್ರಾಮದ ನಿವಾಸಿಗಳಾಗಿದ್ದು, ಆಳಂದ ತಾಲೂಕಿನ ರುದ್ರವಾಡಿ ಗ್ರಾಮದಲ್ಲಿ ಮದುವೆ ಮುಗಿಸಿಕೊಂಡು ವಾಪಸಾಗುವಾಗ ದುರ್ಘಟನೆ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಬಸ್ ಉರುಳಿದ್ದು ಐದು ಜನರು ಗಂಭೀರವಾಗಿ ಗಾಯಗೊಂಡಿದ್ದರು. ಅವರೆಲ್ಲರಿಗೂ ಖಾಸಗಿ ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬಸ್​ಲ್ಲಿದ್ದ ಮಹಿಳೆಯರು, ಮಕ್ಕಳು ಸೇರಿ 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಅವರಿಗೆ ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ಸಿನ ಅಡಿ ಸಿಲುಕಿದವರನ್ನು ಗ್ರಾಮಸ್ಥರ ಸಹಾಯದಿಂದ ರಕ್ಷಣೆ ಮಾಡಲಾಗಿದೆ. ಜೆಸಿಬಿ ಮೂಲಕ ಪಲ್ಟಿಯಾಗಿರುವ ಬಸ್ಅನ್ನು ಮೇಲೆತ್ತಲಾಗಿದೆ.

ಕಲಬುರಗಿ ಬಳಿ ದಿಬ್ಬಣದ ಬಸ್ ಪಲ್ಟಿ: ಇಬ್ಬರು ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಗಾಯಾಳುಗಳನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಕಲಬುರಗಿ ಸಂಚಾರಿ ಒನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ.. ವಿಚಾರಣಾ ಆಯೋಗಕ್ಕೆ ಜೂ. 8ರೊಳಗೆ ಅಹವಾಲು ಸಲ್ಲಿಸಲು ಸೂಚನೆ

Last Updated : Jun 1, 2022, 10:51 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.