ಕಲಬುರಗಿ: ವಿದ್ಯುತ್ ತಂತಿ ತಗುಲಿ ಇಬ್ಬರು ದುರ್ಮರಣ ಹೊಂದಿರುವ ಘಟನೆ ಆಳಂದ ತಾಲೂಕಿನ ಮಾಡ್ಯಾಳ ಗ್ರಾಮದಲ್ಲಿ ನಡೆದಿದೆ.
ಸಿದ್ಧರಾಮ ಪೂಜಾರಿ (58) ಹಾಗೂ ಅಮೃತರಾಯ ಚಿಂಚೋಳಿ (55) ಮೃತರು. ಕುಲಾಲಿ ರಸ್ತೆಯಲ್ಲಿರುವ ಸಿದ್ಧರಾಮ ಪೂಜಾರಿ ಎಂಬವರಿಗೆ ಸೇರಿದ ಜಮೀನಿಗೆ ಹೋದಾಗ ಈ ಅವಘಡ ಸಂಭವಿಸಿದೆ.
ಜಮೀನಿನ ಬದಿಯ ವಿದ್ಯುತ್ ತಂತಿ ಬೇಲಿ ತಗುಲಿ ಇಬ್ಬರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪಿಎಸ್ಐ ಸುರೇಶ್ ಕುಮಾರ್ ಚೌವ್ಹಾಣ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಈ ಕುರಿತು ನಿಂಬರ್ಗಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.