ಕಲಬುರಗಿ: ಅಫಜಲಪುರ ತಾಲೂಕಿನಲ್ಲಿ ಇಬ್ಬರು ರೈತರು ಹಾವು ಕಡಿದು ಮೃತಪಟ್ಟಿದ್ದಾರೆ.
ಬಳೂರ್ಗಿ ಗ್ರಾಮದಲ್ಲಿ ಗ್ರಾಮದ ಖಾಜಪ್ಪ ಕೋತಿ (40) ಎಂಬುವರಿಗೆ ಜಮೀನಿನಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿದೆ. ತಕ್ಷಣ ತಮ್ಮ ಬೈಕ್ ನಲ್ಲಿಯೇ ತೆರಳಿ ಆಸ್ಪತ್ರೆ ದಾಖಲಾಗಿದ್ದಾರೆ. ಆದ್ರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಇನ್ನೊಂದೆಡೆ ಮಾತೊಳ್ಳಿ ಗ್ರಾಮದಲ್ಲಿ ಚಂದ್ರಸಾ ಪಾಸೋಡಿ (35) ಹೊಲದಲ್ಲಿ ಕೆಲಸ ಮಾಡುವಾಗ ಹಾವು ಕಡಿದಿದೆ. ಆತನನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಅಫಜಲಪುರ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.