ಕಲಬುರಗಿ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಟೆಂಪೋ ಪಲ್ಟಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಆಳಂದ ತಾಲೂಕಿನ ನಿಂಬಾಳ ಬಳಿ ಸಂಭವಿಸಿದೆ.
ಆಂದವ್ವ ತೋಳನೂರ (62) ಹಾಗು ಶಾಂತಮಲ್ಲಪ್ಪ ತೋಳನೂರ (70) ಮೃತರು. ಇವರು ಮಹಾರಾಷ್ಟ್ರದ ದುಧನಿ ಮೂಲದವರಾಗಿದ್ದು, ನಿಂಬಾಳದ ಸಂತೆಗೆ ಆಗಮಿಸಿ ವಾಪಸ್ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಸುಮಾರು ಆರು ಜನರಿಗೆ ತೀವ್ರ ಗಾಯಗಳಾಗಿದ್ದು, ಆಂದವ್ವ ಹಾಗು ಶಾಂತಮಲ್ಲಪ್ಪ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮದ್ಯೆ ಸಾವನಪ್ಪಿದ್ದಾರೆ. ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಮಹಾರಾಷ್ಟ್ರದ ಸೋಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ಕುರಿತಂತೆ ಮಾದನಹಿಪ್ಪರಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.