ETV Bharat / state

ಕೊರೊನಾಗೆ 6ನೇ ಬಲಿ... ಕಲಬುರಗಿಯಲ್ಲಿ ಲಾಕ್​ಡೌನ್​ ಸಡಿಲಿಕೆ ತಂದ ಆತಂಕ - corona cases in kalaburagi

ಮೊದಲ ಕೊರೊನಾ ಸಾವು ಸಂಭವಿಸಿದ್ದ ಕಲಬುರಗಿಯಲ್ಲಿ ಮತ್ತೋರ್ವ ಮೃತಪಟ್ಟಿದ್ದು, ಸೋಂಕಿಗೆ ಬಲಿಯಾದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಜೊತೆಗೆ ಹೊಸದಾಗಿ ಇಬ್ರು ಸೋಂಕಿತರು ಪತ್ತೆಯಾಗಿದ್ದಾರೆ.

esi hospital
ಇಎಸ್​​ಐ ಆಸ್ಪತ್ರೆ
author img

By

Published : May 4, 2020, 1:27 PM IST

ಕಲಬುರಗಿ: ಕೊರೊನಾ ವೈರಸ್​ಗೆ ಜಿಲ್ಲೆಯಲ್ಲಿ ಅಟ್ಟಹಾಸ ಮೆರೆಯುತ್ತಿದೆ. ಇಂದು ಮತ್ತೊಂದು ಬಲಿಯಾಗಿದ್ದು, ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ಜಿಲ್ಲೆಯಲ್ಲಿ 6ಕ್ಕೆ ಏರಿಕೆಯಾಗಿದೆ. ಇದರ ಜೊತೆಗೆ ಇಂದು ಇಬ್ಬರು ಕೊರೊನಾ ಸೋಂಕಿತರು ಜಿಲ್ಲೆಯಲ್ಲಿ ಪತ್ತೆಯಾಗಿದ್ದಾರೆ.

ಮೃತ ವ್ಯಕ್ತಿಯು ಪಿ-587 ಆಗಿದ್ದು, ಪುಟಾಣಿಗಲ್ಲಿಯ ನಿವಾಸಿಯಾಗಿದ್ದಾರೆ. ತೀವ್ರ ಉಸಿರಾಟ, ಕೆಮ್ಮು ಮತ್ತು ಜ್ವರದಿಂದ ಬಳಲುತ್ತಿದ್ದ ಈ ವ್ಯಕ್ತಿಯನ್ನು ಏಪ್ರಿಲ್​​ 29ರಂದು ಇಎಸ್​​ಐ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ರೋಗಿ ಮೃತಪಟ್ಟಿದ್ದಾರೆ.

ಇಂದು ಜಿಲ್ಲೆಯಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಪಿ-604ರ ಜೊತೆ ಸಂಪರ್ಕ ಹೊಂದಿದ್ದ 36 ವರ್ಷದ ಮಹಿಳೆ ಮತ್ತು ಹೈದರಾಬಾದ್​ಗೆ ಹೋಗಿ ಬಂದಿದ್ದ ಚಿಂಚೋಳಿಯ 37 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಪತ್ತೆಯಾಗಿದೆ. ಸೋಂಕಿತರಿಗೆ ನಗರದ ಇಎಸ್​​ಐ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯಲ್ಲಿ ಇಲ್ಲಿವರೆಗೆ ಒಟ್ಟು 63 ಸೋಂಕಿತರು ಪತ್ತೆಯಾಗಿದ್ದು, ಇವರಲ್ಲಿ 6 ಮಂದಿ ಸೋಂಕಿತರು ಮೃತಪಟ್ಟಿದ್ದು, 18 ಮಂದಿ ಗುಣಮುಖರಾಗಿದ್ದಾರೆ. ಇನ್ನುಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲಾಕ್​ಡೌನ್​ ಸಡಿಲಿಕೆ ಮತ್ತಷ್ಟು ಆತಂಕ ಹೆಚ್ಚಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.