ಕಲಬುರಗಿ: ಕೊರೊನಾ ಸೋಂಕಿನಿಂದ ಗುಣಮುಖರಾದ ಕಲಬುರಗಿ ನಗರದ ಇಬ್ಬರು ರೋಗಿಗಳನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.
ಕಲಬುರಗಿ ನಗರದ ಮೋಮಿನಪುರ ಪ್ರದೇಶದ 51 ವರ್ಷದ ಪುರುಷ (ರೋಗಿ ಸಂಖ್ಯೆ-255) ಮತ್ತು ಸಂತ್ರಾಸವಾಡಿ ಪ್ರದೇಶದ 35 ವರ್ಷದ ಮಹಿಳೆ(ರೋಗಿ ಸಂಖ್ಯೆ-256) ಇವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡವರು.
ಇವರಿಬ್ಬರಿಗೆ ಏಪ್ರಿಲ್ 14ರಂದು ಕೊರೊನಾ ಸೋಂಕು ದೃಢವಾಗಿದ್ದರಿಂದ ಇ.ಎಸ್.ಐ.ಸಿ.ಯಲ್ಲಿ ಚಿಕಿತ್ಸೆಗೆ ದಾಖಲಾಗಿಸಿತ್ತು. ಇದರಿಂದ ಕಲಬುರಗಿ ಜಿಲ್ಲೆಯಲ್ಲಿ ಇದೂವರೆಗೆ ಕೊರೊನಾ ಪಾಸಿಟಿವ್ ಪತ್ತೆಯಾದ 55 ಜನರಲ್ಲಿ ಒಟ್ಟು 14 ರೋಗಿಗಳು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಉಳಿದಂತೆ 5 ಜನ ನಿಧನ ಹೊಂದಿದ್ದು, 36 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.