ಕಲಬುರಗಿ: ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳಲ್ಲಿ ಕೊರೊನಾ ಪತ್ತೆಯಾಗಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರ ನಿದ್ದೆಗೆಡಿಸಿದೆ.
ಪದವಿ ಕಾಲೇಜು ಪುನರಾರಂಭಗೊಂಡ ಹಿನ್ನೆಲೆ ಕಲಬುರಗಿಯಲ್ಲಿ ಕಾಲೇಜು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಕೊರೊನಾ ತಪಾಸಣೆಗೆ ಒಳಪಡಿಸಲಾಗಿತ್ತು. ಸುಮಾರು 2850 ವಿದ್ಯಾರ್ಥಿ ಹಾಗೂ ಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ಆರೋಗ್ಯ ಇಲಾಖೆ ವರದಿಯಿಂದ ದೃಢಪಟ್ಟಿದೆ.
ಕೆಲ ವಿದ್ಯಾರ್ಥಿಗಳಲ್ಲಿ ಸೋಂಕು ಕಂಡುಬಂದಿದ್ದರಿಂದ ಇತರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಲ್ಲಿ ಆತಂಕ ಮೂಡಿಸಿದೆ. ಪೋಷಕರು ಮಕ್ಕಳನ್ನು ಕಾಲೇಜಿಗೆ ಕಳಿಸಲು ಹಿಂದೇಟು ಹಾಕುತ್ತಿದ್ದಾರೆ. ಎಲ್ಲಾ ವಿದ್ಯಾರ್ಥಿಗಳ ವರದಿ ನೋಡಿದ ನಂತರವಷ್ಟೇ ಕಾಲೇಜಿಗೆ ಪ್ರವೇಶ ನೀಡುವುದು ಸೂಕ್ತ ಎನ್ನುತ್ತಿದ್ದಾರೆ ಪೋಷಕರು.