ಕಲಬುರಗಿ : ಮಹಿಳೆಯನ್ನು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಆಳಂದ ತಾಲೂಕಿನ ವೈಜಾಪುರ ಗ್ರಾಮದ ಕ್ಯಾನಲ್ ಬಳಿಯ ನಿರ್ಜನ ಪ್ರದೇಶದಲ್ಲಿ ನಡದಿದೆ.
ಎಮ್.ಎಸ್.ಕೆ ಮಿಲ್ ನಿವಾಸಿ ನಸ್ರೀಂ ಬೇಗಂ (35) ಕೊಲೆಯಾದ ಮಹಿಳೆ.
ಮಹಿಳೆಯನ್ನು ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಹತ್ಯೆಗೈಯ್ದು, ಶವವನ್ನು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣಕ್ಕೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ನಿಂಬರ್ಗಾ ಪೊಲೀಸರು ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.