ಕಲಬುರಗಿ: ವೈಶಾಖ ಬುದ್ಧ ಪೂರ್ಣಿಮೆ ದಿನದ ನಿಮಿತ್ತ ಕಲಬುರಗಿಯ ಪ್ರತಿಷ್ಠಿತ ಬುದ್ಧ ವಿಹಾರದಲ್ಲಿ ವಿಶೇಷ ಪ್ರಾರ್ಥನೆ ಹಮ್ಮಿಕೊಳ್ಳಲಾಗಿತ್ತು.
ಬುದ್ಧ ಪೂರ್ಣಿಮಾ ಅಂಗವಾಗಿ ಏರ್ಪಡಿಸಿದ್ದ ವಿಷೇಷ ಪ್ರಾರ್ಥನೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಧರ್ಮಪತ್ನಿ ರಾಧಾಬಾಯಿ ಖರ್ಗೆ ಮತ್ತು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಪ್ರಾರ್ಥನೆಯಲ್ಲಿ ಭಾಗವಹಿಸಿ ಬುದ್ಧನ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಿದರು.
ಇದೇ ವೇಳೆ ಬೌದ್ಧ ಭಿಕ್ಷುಗಳು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬುದ್ಧ ಮೂರ್ತಿಗೆ ಹೂವಿನ ವಿಶೇಷ ಅಲಂಕಾರ ಮಾಡಲಾಗಿತ್ತು. ಸಾರ್ವಜನಿಕರಿಂದಲೂ ಸಾಮೂಹಿಕ ಪ್ರಾರ್ಥನೆ ನಡೆಯಿತು. ಬುದ್ಧ ಪೂರ್ಣಿಮೆ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮಗಳ ಬುದ್ಧ ವಿಹಾರ ಆವರಣದಲ್ಲಿ ಆಯೋಜನೆ ಮಾಡಲಾಗಿತ್ತು.