ಕಲಬುರಗಿ: ಜಿಲ್ಲಾಧಿಕಾರಿ ಬಿ. ಶರತ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ನೂತನ ಡಿಸಿಯಾಗಿ ವಸಿರೆಡ್ಡಿ ವಿಜಯ ಜ್ಯೋತ್ನಾ ಅವರನ್ನು ನಿಯೋಜಿಸಲಾಗಿದೆ.
2010ನೇ ಬ್ಯಾಚ್ ಐಎಎಸ್ ಅಧಿಕಾರಿ ವಿ.ವಿ ಜ್ಯೋತ್ನಾ ಅವರು ರಾಜಧಾನಿ ಬೆಂಗಳೂರಿನ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಯ ಕಲ್ಯಾಣ ಮಂಡಳಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಇದೀಗ ಸರ್ಕಾರ ವಸಿರೆಡ್ಡಿ ಅವರನ್ನ ಕಲಬುರಗಿ ಜಿಲ್ಲಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಿದೆ.
ಈ ಹಿಂದೆ ಇದ್ದ 2011ನೇ ಬ್ಯಾಚ್ನ ಜಿಲ್ಲಾಧಿಕಾರಿ ಶರತ್. ಬಿ ಅವರನ್ನು ಮೈಸೂರು ಜಿಲ್ಲಾಧಿಕಾರಿ ವರ್ಗಾವಣೆ ಮಾಡಲಾಗಿದೆ. ಕೆಲ ದಿನಗಳ ಹಿಂದೆ ಶರತ್ ಅವರನ್ನು ವರ್ಗಾವಣೆ ಮಾಡಿದ ಒಂದೇ ಗಂಟೆಯಲ್ಲಿ ಸರ್ಕಾರ ವರ್ಗಾವಣೆಯನ್ನು ರದ್ದು ಪಡಿಸಿತ್ತು. ಇದೀಗ ಮತ್ತೆ ಬಿ ಶರತ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಶರತ್ ಬಿ ಅವರು ಫೆಬ್ರುವರಿ ತಿಂಗಳಿನಲ್ಲಿ ಕಲಬುರಗಿಯಲ್ಲಿ ನಡೆದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆಸಿಕೊಂಡುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದರು. ಕೋವಿಡ್ ಸಂದರ್ಭದಲ್ಲಿಯೂ ಸಹ ಹಗಲಿರುಳು ಶ್ರಮಿಸುವ ಮೂಲಕ ಕಲಬುರಗಿ ಜನರ ಮೆಚ್ಚುಗೆಗಳಿಸಿದ್ದರು.