ಕಲಬುರಗಿ: ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರಕ್ಕೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನಾಮಪತ್ರ ಸಲ್ಲಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕಲಬುರಗಿ, ಕೊಪ್ಪಳ ಸೇರಿದಂತೆ ಹೈದ್ರಾಬಾದ್ ಕರ್ನಾಟಕ ಭಾಗದ ಉಪಾಧ್ಯಾಯರು ಈಶಾನ್ಯ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸುವಂತೆ ಮನವಿ ಮಾಡಿದ್ದರು. ಹೀಗಾಗಿ, ಈ ಭಾಗದಲ್ಲಿ ಚುನಾವಣೆಗೆ ಸ್ಪರ್ಧಿಸಲು ಬಂದಿರುವೆ ಎಂದರು.
ಇದರ ಜೊತೆಗೆ, ಹೈದ್ರಾಬಾದ್-ಕರ್ನಾಟಕ ಸಮಸ್ಯೆಗಳ ವಿರುದ್ಧ ಹೋರಾಟ ಮಾಡಲು ಬಂದಿರುವುದಾಗಿ ಅವರು ತಿಳಿಸಿದರು.