ಕಲಬುರಗಿ: ಲೋಕಸಭೆ ಚುನಾವಣೆಯಲ್ಲಿ ಜಿಲ್ಲೆಯ ವೀರಶೈವ-ಲಿಂಗಾಯತ ಸಮಾಜ ಸಂಪೂರ್ಣ ಕಾಂಗ್ರೆಸ್‌ಗೆ ಬೆಂಬಲ ನೀಡಲಿದೆ ಎಂದು ಮಾಜಿ ಶಾಸಕ ಬಿ.ಆರ್. ಪಾಟೀಲ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಜನರಲ್ಲಿ ಗೊಂದಲ ಮೂಡಿಸುವ ಉದ್ದೇಶದಿಂದ ವೀರಶೈವ-ಲಿಂಗಾಯತ ಸಮಾಜ ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತೆ ಎಂದು ಬಿಜೆಪಿಗರು ಗೊಂದಲ ಉಂಟು ಮಾಡುತ್ತಿದ್ದಾರೆ. ಅದು ಸುಳ್ಳು, ವೀರಶೈವ-ಲಿಂಗಾಯತ ನಾಯಕತ್ವ ಇರೋದು ಕಾಂಗ್ರೇಸ್ ನಲ್ಲಿ ಮಾತ್ರ.
ಇದನ್ನು ಸ್ಪಷ್ಟಪಡಿಸುವ ನಿಟ್ಟಿನಲ್ಲಿ ಏಪ್ರಿಲ್ 12 ರಂದು ಕಲಬುರಗಿಯ ಟೌನ್ ಹಾಲ್ ಆವರಣದಲ್ಲಿ ವೀರಶೈವ-ಲಿಂಗಾಯತ ಸಮಾಜದ ಬೃಹತ್ ಸಮಾವೇಶ ಹಮ್ಮಿಕೊಂಡಿದೆ. ಸಮಾವೇಶದಲ್ಲಿ ಮಾಜಿ ಸಚಿವರಾದ ಶಾಮನೂರ್ ಶಿವಶಂಕರಪ್ಪ ಹಾಗೂ ಸಮಾಜದ ಮುಖಂಡರಾದ ಭೀಮಣ್ಣಾ ಖಂಡ್ರೆ ಹಾಗೂ ಗೃಹಸಚಿವರಾದ ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಲ್ಲಿದ್ದಾರೆ. ಈ ಸಮಾವೇಶದಲ್ಲಿ ಸಮಾಜದ ಸಂಪೂರ್ಣ ಬೆಂಬಲ ಕಾಂಗ್ರೆಸ್‌ಗೆ ನೀಡಿ ಕಲಬುರಗಿಯಿಂದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಗೆಲ್ಲಿಸುವ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.